ಬೆಂಗಳೂರು: ಸಿಎಂ ಬಿಎಸ್ ವೈ ಯಡಿಯೂರಪ್ಪ ಅವರನ್ನ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿ ಕೂತೂಹಲ ಮೂಡಿಸಿದ್ದಾರೆ.
ಕ್ಷೇತ್ರದ ಅಭಿವೃದ್ದಿ ಸಂಬಂಧಿಸಿದಂತೆ ಕ್ಷೇತ್ರದ ಅನುದಾನ ಕಡಿಗೊಂಡಿತ್ತು ಹೀಗಾಗಿ ಈ ಕುರಿತು ಚರ್ಚಿಸಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.ಈ ಭೇಟಿಯಲ್ಲಿ ಯಾವುದೇ ರಾಜಕೀಯವಿಲ್ಲ. ಇದಕ್ಕೆ ಯಾವುದೇ ಬಣ್ಣ ಕಟ್ಟುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಬರ ಮತ್ತು ನೆರೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡಬೇಕಿತ್ತು. ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದು ಪ್ರಯೋಜನವಾಗಲಿಲ್ಲ ಎಂದಿದ್ದಾರೆ.