ಮಾಜಿ ಸಿಎಮ್ ಹೇಳಿಕೆಯಿಂದ ಆಸಕ್ತಿ ಕಳೆದುಕೊಂಡ ಕಾಂಗ್ರೆಸ್

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಯಿಂದ ಕಾಂಗ್ರೆಸ್ ಉಪಚುನಾವಣೆಗೂ ಮುನ್ನವೇ ಉತ್ಸಾಹ ಕಳೆದುಕೊಂಡಿದೆ.

 

 

 

 

 

 

 

 

 

ಮೊನ್ನೆ ಮಾಜಿ ಸಿಎಂ ಕುಮಾರಸ್ವಾಮಿ ನಾನು ಬಿಜೆಪಿ ಸರ್ಕಾರವನ್ನ  ಬೀಳಿಸಲ್ಲ ಎಂದು ಹೇಳಿ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು. ಇದರಿಂದ ಕೈ ಪಾಳೆಯದಲ್ಲಿ ಉತ್ಸಾಹ ಕಡಿಮೆಯಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಚುನಾವಣೆಗಾಗಿ ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ವಿರೋಧಿ ಬಣ ಸಾಮೂಹಿಕ ನಾಯಕತ್ವ ಕೊರತೆಯ ಅಸ್ತ್ರವನ್ನ ಬಳಸಿದೆ. ಉಪಚುನಾವಣೆಯಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ದೂರ ಉಳಿಯುವ ಸಾಧ್ಯತೆ ಇದೆ. ಇನ್ನು ಪಕ್ಷದ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕ ನಾಯಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಉಪಚುನಾವಣೆ ಎದುರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ