ನವದೆಹಲಿ: ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ಸಿಬಿಐ ಮಂಗಳವಾರ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸಿದೆ.
ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ 35 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಇದರಲ್ಲಿ 7,000 ಕೋಟಿ ರೂಪಾಯಿ ಅಧಿಕ ಮೊತ್ತದ ವಂಚನೆ ಆಗಿದೆ. ಈ ಹಿನ್ನೆಲೆಯಲ್ಲಿ ದೇಶದ 169 ಊರುಗಳಲ್ಲಿ ಮಂಗಳವಾರ ಶೋಧ ಕಾರ್ಯ ನಡೆಸುತ್ತಿದೆ.
ಈ 169 ಊರುಗಳು ಆಂಧ್ರಪ್ರದೇಶ, ಚಂಡೀಗಢ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ದಾದ್ರ, ನಗರ್ ಹವೇಲಿಯಲ್ಲಿವೆ.