ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಸಿಬಿಐ ಶೋಧ: ವಂಚನೆ ಮೊತ್ತ ಬರೋಬ್ಬರಿ 7,000 ಕೋಟಿ ರೂಪಾಯಿ

ನವದೆಹಲಿ: ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ಸಿಬಿಐ ಮಂಗಳವಾರ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸಿದೆ.

ಸೆಂಟ್ರಲ್ ಬ್ಯೂರೋ ಆಫ್ ಇನ್​ವೆಸ್ಟಿಗೇಷನ್​ (ಸಿಬಿಐ) ಬ್ಯಾಂಕ್​ ವಂಚನೆಗೆ ಸಂಬಂಧಿಸಿದಂತೆ 35 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಇದರಲ್ಲಿ 7,000 ಕೋಟಿ ರೂಪಾಯಿ ಅಧಿಕ ಮೊತ್ತದ ವಂಚನೆ ಆಗಿದೆ. ಈ ಹಿನ್ನೆಲೆಯಲ್ಲಿ ದೇಶದ 169 ಊರುಗಳಲ್ಲಿ ಮಂಗಳವಾರ ಶೋಧ ಕಾರ್ಯ ನಡೆಸುತ್ತಿದೆ.

ಈ 169 ಊರುಗಳು ಆಂಧ್ರಪ್ರದೇಶ, ಚಂಡೀಗಢ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ದಾದ್ರ, ನಗರ್​ ಹವೇಲಿಯಲ್ಲಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ