ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು

ಬೆಂಗಳೂರು,ನ.8-ಮಿಂಟೋ ಆಸ್ಪತ್ರೆ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿವಿಪುರಂ ಠಾಣೆ ಪೋಲೀಸರು ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಪಡೆದಿದ್ದ 21 ಮಂದಿಗೆ  ದೃಷ್ಟಿದೋಷ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪರಿಹಾರ  ಸಿಕ್ಕಿರಲಿಲ್ಲ.  ವಿಷಯ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ಪರಿಹಾರಕ್ಕಾಗಿ ಒತ್ತಾಯಿಸಿದ್ದರು.

ಆ ಸಂದರ್ಭದಲ್ಲಿ ವೈದ್ಯರು ಸ್ಪಂದಿಸಲಿಲ್ಲ. ಈ ವಿಷಯವಾಗಿ ವೈದ್ಯರು ಹಾಗೂ ಕರವೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ ನೂಕಾಟ ಉಂಟಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಿಂಟೋ ಆಸ್ಪತ್ರೆ ಹಿರಿಯ ವೈದ್ಯರು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕರವೇ  ಕಾರ್ಯಕರ್ತರ ವಿರುದ್ದ ವಿವಿಪುರಂ  ಠಾಣೆಗೆ ದೂರು ನೀಡಿದ್ದರು.

ಈ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಕಿರಿಯ ವೈದ್ಯರು ಒಪಿಡಿ ಬಂದ್ ಮಾಡಿ  ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ