ಪ್ರತಿಯೊಂದು ಕ್ಷೇತ್ರದಲ್ಲಿಯೂ ಬಾಲಗಂಗಾಧರನಾಥ ಸ್ವಾಮೀಜಿಯವರ ಅಪರಿಮಿತ ಸೇವೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ನ.8- ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಆತ್ಮಸ್ಥೈರ್ಯವನ್ನು ಮೂಡಿಸಿದವರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ಬಿಜಿಎಸ್ ಹೆಲ್ತ್ ಅಂಡ್ ಎಜುಕೇಷನ್ ಸಿಟಿಯಲ್ಲಿ ನಡೆದ 12ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಅಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಬಾಲಗಂಗಾಧರನಾಥ ಸ್ವಾಮೀಜಿಯವರು ಅಪರಿಮಿತ ಸೇವೆ ಸಲ್ಲಿಸಿದ್ದವರು.ಅಂತಹ ಮಹಾನ್ ಗುರುಗಳ ಹೆಸರಿನಲ್ಲಿ ಪ್ರತಿವರ್ಷ ಸಂಸ್ಥಾಪಕರ ದಿನಾಚರಣೆ ಮತ್ತು ಸಾಂಸ್ಕøತಿಕ ಉತ್ಸವ ಏರ್ಪಡಿಸುತ್ತಿರುವುದು ಶ್ಲಾಘನೀಯ ಎಂದರು.

ಪೆÇೀಷಕರು ತಮ್ಮ ಮಕ್ಕಳಿಗೆ ವಹಿಸುವ ಕಾಳಜಿ  ಅವರ ಮುಂದಿನ ಭವಿಷ್ಯಕ್ಕೆ ನೆರವಾಗುವಂತಿಬೇಕು. ಹಾಗೆಯೇ  ಅಧ್ಯಾಪಕರು  ಶಿಕ್ಷಣ ಸಂಸ್ಥೆಯ ಬೆನ್ನೆಲುಗಳಿದ್ದ ಹಾಗೆ. ಹೀಗಾಗಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಕರೆ ನೀಡಿದರು.

ಸಂಸದೆ ಸುಮಲತಾ  ಅಂಬರೀಶ್ ಮಾತನಾಡಿ, ಧಾರ್ಮಿಕ ಸಂಸ್ಥೆಯೊಂದು 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತೆರೆದು ಯಶಸ್ವಿಯಾಗಿ ಮುನ್ನಡೆಸುವುದು ಸುಲಭವಲ್ಲ. ಆದರೆ ಅಂತಹ ಸಾಧನೆಯನ್ನು ಮಾಡಿದ ಶ್ರೇಯಸ್ಸು  ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗೆ ಸಲ್ಲುತ್ತದೆ ಎಂದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಬದುಕಿನಲ್ಲಿ ನಮ್ಮ ಉದ್ದಾರಕ್ಕೆ ಬೆಳಕು ನೀಡಿದವರನ್ನು ಸ್ಮರಿಸುವುದು ಪ್ರತಿಯೊಬ್ಬರ ಆದ್ಯಕರ್ತವ್ಯ. ಬಾಲಗಂಗಾಧರನಾಥ ಸ್ವಾಮೀಜಿ ಅವರು ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಂತರ ಮಠ ವಿಶ್ವವಿಖ್ಯಾತಿ ಪಡೆದಿದೆ.ಇದಕ್ಕೆ ಗುರೂಜಿಯವರ ಕಠಿಣ ತಪಸ್ಸೇ ಕಾರಣ ಎಂದು ಹೇಳಿದರು.

ಪ್ರಾರಂಭದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದರೆ ಜನ್ಮ ಸಾರ್ಥಕವಾಗುತ್ತದೆ ಎಂದು ಶ್ರೀಗಳು ಭಾವಿಸಿದ್ದರಂತೆ. ಆದರೆ ಶ್ರೀಗಳ ಜೀವಿತಾವಧಿಯಲ್ಲೇ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 1,25,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದನ್ನು ಗುರುಗಳು ಕಂಡಿದ್ದರು.

ಗುರುಗಳನ್ನು ಸ್ಮರಿಸುವ ಈ ಸಮಾರಂಭದಲ್ಲಿ ನಮ್ಮೊಳಗಿರುವ ಜ್ಞಾನ ಪ್ರಜ್ಞೆಯನ್ನು ಜಾಗೃತಿಗೊಳಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಹೂಗಳಿಂದ  ಅಲಂಕೃತಗೊಂಡಿದ್ದ ಹಂಸ ವಾಹನದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಕಾಶನಾಥ ಸ್ವಾಮೀಜಿ ಅವರನ್ನು ಭವ್ಯ ಮೆರವಣಿಗೆ ಮೂಲಕ ಸಭಾಂಗಣಕ್ಕೆ ಕರೆತರಲಾಯಿತು.

ಇದೇ ಸಂದರ್ಭದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಯ ಶಿವಯ್ಯ ಅವರಿಗೆ ಬಿಜಿಎಸ್ ಸೇವಾರತ್ನ ನೀಡಿ ಸನ್ಮಾನಿಸಲಾಯಿತು. ಸಾಂಸ್ಕøತಿಕ ಉತ್ಸವದಲ್ಲಿ ಬೆಂಗಳೂರು ಮತ್ತು ದೆಹಲಿಯಲ್ಲಿರುವ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ  ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.

ಡಾ.ಶ್ರೀ.ಪ್ರಕಾಶನಾಥ ಸ್ವಾಮೀಜಿ, ರಾಜಸ್ಥಾನದ ಆರ್ಶಾ ಆಶ್ರಮದ ಶ್ರೀ ಅವೈದ್ಯನಾಥ ಜೀ ಮಹಾರಾಜ್, ಆರ್ಯ ಶಂಕರನಾರಾಯಣ, ಪ್ರಾಂಶುಪಾಲರಾದ ಡಾ.ಪುಟ್ಟರಾಜು,ಅಯ್ಯಪ್ಪ ನಾಯರ್ ಮೊದಲಾದವರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ