ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ. ಶಾಸಕರ ನಡೆಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌ ವಿಪಕ್ಷ ಮತ್ತು ಅಧಿಕಾರದಲ್ಲಿರುವ ಪಕ್ಷಗಳಿಗೆ ನೈತಿಕತೆ ಇರಬೇಕು ಎಂದಿದೆ. ಉಪ ಚುನಾವಣೆಯಲ್ಲಿ ಅನರ್ಹಗೊಂಡ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.

ಪ್ರಮುಖಾಂಶಗಳು
– 17 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್‌ ಆದೇಶ ಎತ್ತಿ ಹಿಡಿದ ನ್ಯಾ. ಎನ್‌ ವಿ ರಮಣ
– ಅನರ್ಹಗೊಂಡಿರುವ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದು
– ಉಪ ಚುನಾವಣೆಯಲ್ಲಿ ಗೆದ್ದ ನಂತರವಷ್ಟೇ ಬಿಎಸ್‌ವೈ ಸಂಪುಟದಲ್ಲಿ ಸಚಿವರಾಗಲು ಅವಕಾಶ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ