ಇನ್ನೂ ಸಹಜ ಸ್ಥಿತಿಗೆ ಬರದ ಕಣಿವೆ ಪ್ರಾಂತ್ಯ

ಶ್ರೀನಗರ, ನ.13- ಕಾಶ್ಮೀರ ಪ್ರಾಂತ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370 ಮತ್ತು 35ಎ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ 100 ದಿನಗಳಾದರೂ ಕಣಿವೆ ಸಹಜ ಸ್ಥಿತಿಗೆ ಇನ್ನೂ ಮರಳಿಲ್ಲ.

ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರತ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ತಿತ್ವಕ್ಕೆ ಬಂದಿದೆ. ಕಣಿವೆ ಪ್ರಾಂತ್ಯದಲ್ಲಿ ಜನಜೀವನ ಪೂರ್ಣ ಪ್ರಮಾಣದಲ್ಲಿ ಸಾಮಾನ್ಯ ಸ್ಥಿತಿಗೆ ಹಿಂದಿರುಗಿಲ್ಲ.

ಅಂಗಡಿ-ಮುಂಗಟ್ಟುಗಳು ಮತ್ತು ವಾಣಿಜ್ಯ ಮಳಿಗೆಗಳು ಮುಚ್ಚಿದ ಸ್ಥಿತಿಯಲ್ಲಿಯೇ ಮುಂದುವರೆದಿದ್ದು, ಆಗಸ್ಟ್ 5 ರಿಂದ (370 ವಿಧಿ ರದ್ಧತಿ ದಿನಾಂಕದಿಂದ) ಕೋಟ್ಯಂತರ ರೂ.ಗಳ ಆರ್ಥಿಕ ನಷ್ಟ ಸಂಭವಿಸಿದೆ.

ಸಾರ್ವಜನಿಕ ವಾಹನಗಳ ಸಂಚಾರ ಇನ್ನೂ ಅಸ್ತವ್ಯಸ್ತವಾಗಿದೆ. ಶಾಲಾ-ಕಾಲೇಜುಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಂಟರ್‍ನೆಟ್ ಮತ್ತು ಪ್ರೀಪೇಯ್ಡ್ ಮೊಬೈಲ್ ಪೋನ್‍ಗಳ ಕಣ್ಣಾಮುಚ್ಚಾಲೆ ಮುಂದುವರಿದಿದೆ.

ಮೂವರು ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ ಕೆಲವು ಪಕ್ಷಗಳ ನಾಯಕರ ಗೃಹ ಬಂಧನ ಮುಂದುವರಿಸಲಾಗಿದೆ.

ಶ್ರೀನಗರ ಸೇರಿದಂತೆ ವಿವಿಧ ಪ್ರದೇಶಗಳ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಗೆ ಅಡ್ಡಿಯಾಗಿದೆ.

ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಲೆಫ್ಟಿನೆಂಟ್ ಗೌರ್ನರ್‍ಗಳನ್ನು ನೇಮಕ ಮಾಡಲಾಗಿದೆಯಾದರೂ, ಅವುಗಳ ಕಾರ್ಯನಿರ್ವಹಣೆ ಕುಂಠಿತವಾಗಿಯೇ ಸಾಗಿದೆ. ಕಣಿವೆ ಪ್ರಾಂತ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಲು ಮತ್ತಷ್ಟು ಸಮಯ ಬೇಕಾಗುತ್ತದೆ. ಸಿಜೆಐ ಅವರ ಕಚೇರಿ ಕೂಡ ಆರ್‍ಟಿಐಗೆ- ದೆಹಲಿ ಹೈಕೋರ್ಟ್‍ನ ತೀರ್ಪನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಾಧೀಶರ ಕಚೇರಿ ಕೂಡ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಒಳಪಡಲಿದೆ ಎಂದು ವ್ಯಾಖ್ಯಾನಿಸುವ ಮೂಲಕ ಮಹತ್ವದ ತೀರ್ಪು ನೀಡಿರುವ ಸರ್ವೋಚ್ಚ ನ್ಯಾಯಾಲಯ ಸಾಂವಿಧಾನಿಕ ಪೀಠ ಕೆಲವು ಷರತ್ತುಗಳನ್ನೂ ಕೂಡ ಅನ್ವಯಿಸಿದೆ.

ಪಾರದರ್ಶಕತೆ ಕಾಯ್ದುಕೊಳ್ಳಲ ಒಳಪಡಿಸಬೇಕೆಂಬ ದೆಹಲಿ ಹೈಕೋರ್ಟ್‍ನ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಎತ್ತಿಹಿಡಿದಿದೆ.

ಹೀಗಾಗಿ ಮುಖ್ಯ ನ್ಯಾಯಮೂರ್ತಿಯವರ ಕಾರ್ಯಾಲಯವೂ ಸಹ ಇನ್ನು ಮುಂದೆ ಆರ್‍ಟಿಐ ವ್ಯಾಪ್ತಿಗೆ ಒಳಪಟ್ಟಂತಾಗಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ 3:2 ಅನುಪಾತದಲ್ಲಿ ತೀರ್ಪನ್ನು ಪ್ರಕಟಿಸಿದೆ.

ಪೀಠದ ಓರ್ವ ನ್ಯಾಯಾಧೀಶರು ಸುಪ್ರೀಂಕೋರ್ಟ್ ನ್ಯಾಯಾಂಗದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ಒಳಪಡಿಸುವುದು ಬೇಡ ಎಂಬ ಅಭಿಪ್ರಾಯ ಹೊಂದಿದ್ದರು. ಆದರೆ ಇಬ್ಬರು ನ್ಯಾಯಾಧೀಶರು ಆರ್‍ಟಿಐ ವ್ಯಾಪ್ತಿಗೆ ಮುಖ್ಯನ್ಯಾಯಾಧೀಶರ ಕಚೇರಿ ಕೂಡ ಬರಬೇಕು ಎಂದು ಅಭಿಪ್ರಾಯಪಟ್ಟಿದ್ದರಿಂದ ತೀರ್ಪು ಪ್ರಕಟಗೊಂಡಿದೆ.

ದೇಶದ ಗೌಪ್ಯತೆಗೆ ಧಕ್ಕೆಯುಂಟು ಮಾಡುವ ವಿಷಯಗಳನ್ನು ಹೊರತುಪಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದೆಂಬ ಉದ್ದೇಶದಿಂದ 2005ರ ಅಕ್ಟೋಬರ್ 12 ರಂದು ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೆ ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿಗಳ ಕಚೇರಿ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಆದರೆ, ಸಿಜೆಐ ಕಚೇರಿ ಹಾಗೂ ಸುಪ್ರೀಂಕೋರ್ಟ್ ಕೂಡ ಸಾರ್ವಜನಿಕ ಸ್ವಾಮ್ಯಕ್ಕೆ ಸೇರುತ್ತದೆ ಎಂದು ದೆಹಲಿ ಹೈಕೋರ್ಟ್ 2010ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸ್ವತಃ ಸುಪ್ರೀಂಕೋರ್ಟ್‍ನ ಪ್ರಧಾನಕಾರ್ಯದರ್ಶಿ ಹಾಗೂ ಕೇಂದ್ರೀಯ ಸಾರ್ವಜನಿಕ ಸಂಪರ್ಕಾಧಿಕಾರಿ ಸರ್ವೋಚ್ಚ ನ್ಯಾಯಾಲಯಕ್ಕೆ 2010ರಲ್ಲಿ ಮೂರು ಅರ್ಜಿ ಸಲ್ಲಿಸಿದ್ದರು. ಈ ವರ್ಷ ಏಪ್ರಿಲ್‍ನಲ್ಲಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಈ ಕುರಿತ ತೀರ್ಪನ್ನು ಕಾಯ್ದಿರಿಸಿತ್ತು. ಈ ಬಗ್ಗೆ ಕೂಡ ನ್ಯಾ.ರಂಜನ್ ಗೊಗೋಯ್ ನಿವೃತ್ತಿಗೂ ಮುನ್ನ ಮಹತ್ವದ ತೀರ್ಪು ಪ್ರಕಟಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ