ಸ್ವಾಭಿಮಾನಿ ಹೆಸರಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ

ಬೆಂಗಳೂರು : ಇಂದು ಪಕ್ಷಕ್ಕೆ ಸೇರ್ಪಡೆಯಾದ ಅನರ್ಹ ಶಾಸಕ ಎಂಟಿಬಿ ನಾಗಾರಾಜ್​ಗೆ ಬಿಜೆಪಿ ಟಿಕೆಟ್​ ನೀಡಲು ತೀರ್ಮಾನಿಸಿರುವ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್​ ಬಚ್ಚೇಗೌಡ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದಾರೆ. ಸಾವಿರಾರು ಜನ ಕಾರ್ಯಕರ್ತರ ಅಬ್ಬರದ ನಡುವೆ ಇಂದು ಸ್ವಾಭಿಮಾನಿ ಹೆಸರಲ್ಲಿ ಶರತ್​ ಬಚ್ಚೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.

ಕ್ಷೇತ್ರದಲ್ಲಿ ತಮ್ಮ ಎದುರಾಳಿಯಾಗಿರುವ ಎಂಟಿಬಿ ನಾಗರಾಜ್​ಗೆ ಪಕ್ಷ ಟಿಕೆಟ್​ ನೀಡುತ್ತಿರುವುದರ ವಿರುದ್ಧ ಅಸಮಾಧಾನಗೊಂಡಿದ್ದ ಶರತ್​, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಎಚ್ಚರಿಸಿದರು. ಇನ್ನು ಸುಪ್ರೀಂಕೋರ್ಟ್​ ತೀರ್ಪಿನ ಬಳಿಕ ನಾಮಪತ್ರ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇಂದು ಎಂಟಿಬಿ ಬಿಜೆಪಿಗೆ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡನೆಯಾದ ಹಿನ್ನೆಲೆ ಅವರು ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಶರತ್​ ಬಚ್ಚೇಗೌಡಗೆ ಜೆಡಿಎಸ್​ ಸಂಪೂರ್ಣ ಬೆಂಬಲ ನೀಡುವುದಾಗಿ ಜೆಡಿಎಸ್​ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೆ ಮುನ್ನ ಅವರು ಹೊಸಕೋಟೆ ಅವಿಮುಕ್ತೇಶ್ವರ ದೇವಸ್ಥಾನ, ದರ್ಗಾದಲ್ಲಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು.

ಬೃಹತ್​ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ
ಎಂಟಿಬಿ ಹಾಗೂ ಶರತ್​ ಬಚ್ಚೇಗೌಡ ಅವರಿಗೆ ಪ್ರತಿಷ್ಠೆಯ ಕದನವಾಗಿರುವ ಹೊಸಕೋಟೆ ಕ್ಷೇತ್ರ  ಜಿದ್ದಾಜಿದ್ದಿ ಕಣವಾಗಿ ರೂಪುಗೊಂಡಿದೆ. ಬಿಜೆಪಿ ವಿರುದ್ಧ  ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಶರತ್​ ಬಚ್ಚೇಗೌಡ ಈಗಾಗಲೇ ಸ್ವಾಭಿಮಾನಿ ಹೆಸರಿನಲ್ಲಿ ಕಣಕ್ಕೆ ಇಳಿದಿದ್ದು, ಬೃಹತ್​ ಬೆಂಬಲಿಗರ ಮೆರವಣಿಗೆಯೊಂದಿಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ