ಬೆಂಗಳೂರು: ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಒಟ್ಟು 1,195 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
ಉಪ ಚುನಾವಣೆಯ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿದ್ದ ಚರಾಸ್ತಿ, ಸ್ಥಿರಾಸ್ತಿಯನ್ನು ಘೋಷಿಕೊಂಡಿದ್ದಾರೆ. ಅಫಿಡವಿಟ್ ಪ್ರಕಾರ ಎಂಟಿಬಿ ನಾಗರಾಜ್, 419 ಕೋಟಿ 28 ಲಕ್ಷ 63 ಸಾವಿರದ 731 ರೂ. ಮೌಲ್ಯದ ಚರಾಸ್ತಿ, 2.54 ಕೋಟಿ ರೂ. ಮೌಲ್ಯದ ಕಾರುಗಳು ಸೇರಿದಂತೆ ಒಟ್ಟು 1,195 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಕೇವಲ ಒಂದೇ ವರ್ಷದಲ್ಲಿ ಎಂಟಿಬಿ ನಾಗರಾಜ್ ಅವರ ಆಸ್ತಿ ಮೌಲ್ಯದಲ್ಲಿ 180 ಕೋಟಿ ರೂ. ಏರಿಕೆಯಾಗಿದೆ.
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನದಲ್ಲಿ 1,015 ಕೋಟಿ ಘೋಷಣೆಗೊಂಡಿದ್ದರು.
ಎಂಟಿಬಿ ನಾಗರಾಜ್ ಹೆಸರಿನಲ್ಲಿ ಚರಾಸ್ತಿ 314 ಕೋಟಿ 75 ಲಕ್ಷದ 54 ಸಾವಿರದ 785 ರೂ., ಸ್ಥಿರಾಸ್ತಿ 394 ಕೋಟಿ 63 ಲಕ್ಷ 53 ಸಾವಿರದ 309 ರೂ., ವಾರ್ಷಿಕ ಆದಾಯ 102 ಕೋಟಿ ರೂ. ಹಾಗೂ 27 ಕೋಟಿ 70 ಲಕ್ಷದ 31 ಸಾವಿರದ 565 ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದರು. ಎಂಟಿಬಿ ನಾಗರಾಜ್ ಅವರು 8ನೇ ತರಗತಿ ವರೆಗೆ ವಿದ್ಯಾಭ್ಯಾಸ ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಪತ್ನಿ ಶಾಂತಕುಮಾರಿ ಹೆಸರಿನಲ್ಲಿ 122 ಕೋಟಿ 40 ಲಕ್ಷದ 9 ಸಾವಿರದ 258 ರೂ. ಚರಾಸ್ತಿ, 184 ಕೋಟಿ 1 ಲಕ್ಷದ 12 ಸಾವಿರ ರೂ. ಸ್ಥಿರಾಸ್ತಿ ಹಾಗೂ ಅವರ ವಾರ್ಷಿಕ ಆದಾಯ 52 ಕೋಟಿ ರೂ. ಸೇರಿದಂತೆ 25 ಲಕ್ಷ ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದರು. 2013ರ ಚುನಾವಣೆ ವೇಳೆ 470 ಕೋಟಿ 13 ಲಕ್ಷದ 52 ಸಾವಿರದ 248 ರೂ. ಆಸ್ತಿಯನ್ನು ಎಂಟಿಬಿ ನಾಗರಾಜ್ ಘೋಷಿಸಿಕೊಂಡಿದ್ದರು.