ಮುಂಬೈ: ಬಿಜೆಪಿ ಜೊತೆ ಸರ್ಕಾರ ರಚಿಸುವ ಕುರಿತು ಎನ್ ಸಿಪಿ ಮುಖ್ಯಸ್ಥ ಶರಾದ್ ಪವಾರ್ ಪಕ್ಷದ ಶಾಸಕರಿಗೆ ಬುಲಾವ್ ನೀಡಿದ್ದಾರೆ.
ಸಿಎಮ್ ಆಗಿ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಎನ್ ಸಿಪಿ ಮುಖ್ಯಸ್ಥ ಶಾರದ್ ಪವಾರ್ ತಮ್ಮೆಲ್ಲ ಶಾಸಕರಿಗೆ ಕರೆದಿದ್ದಾರೆ. ಪಕ್ಷದ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್ ಸಿಪಿ ಸೈದ್ದಂತಿಕ ಭಿನ್ನಭಿಪ್ರಾಯಗಳಿಂದ ಹಾವು ಮುಂಗುಸಿಯಂತ್ತಿದ್ದವು. ಇದೀಗ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ನೀಡಬೇಕೆನ್ನುವ ಹಿನ್ನೆಲೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ.
ಶಾಸಕರನ್ನ ಅಜಿತ್ ಪವಾರ್ ಗೋವಾಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅವರನ್ನ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ.
ಕಾಂಗ್ರೆಸ್ ತುರ್ತು ಸಭೆಯನ್ನ ಕರೆದಿದೆ. ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಜಂಟಿ ಸುದ್ದಿಗೋಷ್ಠಿ ನಡೆಸಲಿದೆ. ಎನ್ ಸಿಪಿ 54 ಬಿಜೆಪಿ 105 ಸ್ಥಾನಗಳನ್ನ ಪಡೆದಿದೆ.