15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಶುರುವಾಗಿದೆ

15 ಕ್ಷೇತ್ರಗಳ ಉಪಚುನಾವಣೆಯ ಮತಮತದಾನ ಶುರುವಾಗಿದೆ

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ರಾಜ್ಯದ 15ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಸೇರಿದಂತೆ 165 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರರು ತೀರ್ಮಾನಿಸಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ.

ಇನ್ನು ಉಪಚುನಾವಣೆಗೆ 900 ವೀಕ್ಷಕರನ್ನು ನಿಯೋಜನೆ ಮಾಡಲಾಗಿದ್ದು, 19,299 ಮತಗಟ್ಟೆ ಅಧಿಕಾರಿಗಳು ಮತ್ತು 42,509 ಸಿಬ್ಬಂದಿಯನ್ನು ಕರ್ತವ್ಯಕ್ಕೆ ಚುನಾವಣಾ ಆಯೋಗ ನಿಯೋಜಿಸಿದೆ. ಭದ್ರತೆಗಾಗಿ 11,241 ರಾಜ್ಯ ಪೊಲೀಸರು, 2511 ಸಿಎಪಿಎಫ್ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ. ಬಸ್, ಕಾರು, ಜೀಪು ಸೇರಿದಂತೆ 846 ವಾಹನಗಳನ್ನು ಚುನಾವಣಾ ಕಾರ್ಯಕ್ಕಾಗಿ ಬಳಸಿಕೊಳ್ಳಲಾಗಿದೆ.

ಇಂದು ನಡೆಯೋ ಬೈಎಲೆಕ್ಷನ್​ನ 15 ಕ್ಷೇತ್ರಗಳ ಪೈಕಿ ಯಶವಂತಪುರ, ಮಹಾಲಕ್ಷ್ಮಿಲೇಔಟ್, ಕೆ.ಆರ್.ಪುರಂ, ಚಿಕ್ಕಬಳ್ಳಾಪುರ, ಹುಣಸೂರು, ಕೆಆರ್​ಪೇಟೆ ಹಾಗೂ ಹಿರೇಕೆರೂರು ಕ್ಷೇತ್ರಗಳು ಪ್ರತಿಷ್ಠೆಯ ಕಣಗಳಾಗಿದ್ದು, ಇತ್ತ ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಮತ್ತು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಗೋಕಾಕ್​ನಲ್ಲೂ ರಮೇಶ್ ಜಾರಕಿಹೊಳಿ ಮೊದಲ ಬಾರಿ ಭಾರಿ ಪೈಪೋಟಿ ಎದುರಿಸುವಂತಾಗಿದೆ.

ಇನ್ನು ಮತದಾರರ ಗುರುತಿನ ಚೀಟಿ ಇಲ್ಲದ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಪಾಸ್‍ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ನರೇಗಾ ಜಾಬ್ ಕಾರ್ಡ್, ಆಧಾರ್​​ ಕಾರ್ಡ್​ ಸೇರಿದಂತೆ ಭಾವಚಿತ್ರವಿರುವ ಇತರೆ 11 ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ