ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ; ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ.

ವಿಶ್ವನಾಥ್ ಸಜ್ಜನರ್ ಎನ್‍ಕೌಂಟರ್ ಸ್ಪೆಷಲಿಸ್ಟ್ ಆಗಿದ್ದು, ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ವಿಶ್ವನಾಥ್ ಸಜ್ಜನರ್ ವಾರಂಗಲ್ ಎಸ್‍ಪಿ ಆಗಿದ್ದರು. ಆಗ ಆಸಿಡ್ ದಾಳಿ ಆರೋಪಿಗಳು ಎನ್‍ಕೌಂಟರ್ ನಲ್ಲಿ ಹತ್ಯೆಗೈದಿದ್ದರು. ಆ ಎನ್‍ಕೌಂಟರ್ ಬಳಿಕ ಆ್ಯಸಿಡ್ ದಾಳಿಯಲ್ಲಿ ಇಳಿಕೆ ಕಂಡಿತ್ತು.

ವೀರ ಕನ್ನಡಿಗ ವಿಶ್ವನಾಥ್ ಈಗ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ್ದಾರೆ. ಅಲ್ಲದೆ ಕಾಮುಕರನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೇಪಿಸ್ಟ್ ಗಳ ಎನ್‍ಕೌಂಟರ್ ಬೆನ್ನಲ್ಲೇ ಹೈದಾರಾಬಾದ್‍ನಲ್ಲಿ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ.

ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ