ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 13 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬಿಎಸ್ ಯಡಿಯೂರಪ್ಪ ಮಾತನಾಡಿದರು.
ಕಾಂಗ್ರೆಸ್ ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಪಕ್ಷವಾಗಿ ಸಂಪೂರ್ಣ ಸಹಕಾರ ನೀಡುವ ವಿಶ್ವಾಸವಿದೆ. ಸರ್ಕಾರದ ಅವಧಿ ಪೂರ್ಣವಾದ ಬಳಿಕ ಮತ್ತೊಮ್ಮೆ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆ ಫಲಿತಾಂಶ ದ ಬಳಿಕ ಬದಲಾವಣೆ ಯಾಗಲಿದೆ ಎಂದು ಹೇಳಿದ್ದಾರೆ. ನಾವು ಆಡಳಿತದಲ್ಲಿ ಮುಂದುವರಿಯುತ್ತೇವೆ ಹಾಗೆ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಮುಂದುವರೆಯಲಿದೆ ಎಂಬುದನ್ನೇ ಅವರು ಹೇಳಿರಬಹುದೇನೋ ಎಂದು ಯಡಿಯೂರಪ್ಪ ಮಾರ್ಮಿಕ ಉತ್ತರ ನೀಡಿದರು.