ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ,ಡಿ.10- ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ನಂತ್ರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ನೀಡಿದ್ದರು. ಇದೀಗ ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕೆ.ಸಿ.ವೇಣುಗೋಪಾಲ್ ಅವರು ಸೋನಿಯಾಗಾಂಧಿಯವರಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಮುಂದಿನ ವಾರದೊಳಗೆ ಶೀಘ್ರದಲ್ಲಿ ಮತ್ಮೊಬ್ಬರನ್ನು ನೇಮಕ ಮಾಡಲಾಗುವುದು ಎನ್ನಲಾಗುತ್ತಿದೆ. ಇನ್ನು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಫಲಿತಾಂಶವನ್ನು ಪಡೆದುಕೊಳ್ಳದ ಕಾರಣ, ಈಗಾಗಲೇ ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್‍ಗುಂಡೂರಾವ್ ಅವರು ರಾಜೀನಾಮೆ ಸಲ್ಲಿಸಿದ್ದು, ಆ ಸಾಲಿಗೆ ಈಗ ಕೆ.ಸಿ.ವೇಣುಗೋಪಾಲ್ ಸೆರಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ