ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಡಿ.12-ಆರೋಗ್ಯದ ಏರುಪೇರಿನಿಂದಾಗಿ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಂಜೆಯೊಳಗಾಗಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

ನಿನ್ನೆ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆದುಕೊಂಡಿದ್ದರು. ಅವರ ಹೃದಯದ ಎರಡು ರಕ್ತನಾಳಗಳು ಬ್ಲಾಕ್ ಆಗಿರುವುದು ಕಂಡುಬಂದಿತ್ತು. ಅದರಲ್ಲಿ ಒಂದಕ್ಕೆ ನಿನ್ನೆ ರಾತ್ರಿಯೇ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಮೂಲಕ ಸ್ಟಂಟ್ ಅಳವಡಿಸಲಾಗಿದೆ.

ಇಂದು ಮಧ್ಯಾಹ್ನದವರೆಗೂ ತೀವ್ರ ನಿಗಾ ಘಟಕದಲ್ಲಿ ಸಿದ್ದರಾಮಯ್ಯ ಅವರಿಗೆ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ವಾರ್ಡ್‍ಗೆ ಶಿಫ್ಟ್ ಮಾಡಲಾಗಿದ್ದು, ಸಂಜೆಯೊಳಗೆ ಬಿಡುಗಡೆ ಮಾಡಲಾಗುತ್ತದೆ.

ಕಂಡುಬಂದಿದ್ದು, ಅವರು ಎಂದಿನಂತೆ ಲವಲವಿಕೆಯಿಂದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಜಮೀರ್ ಅಹಮ್ಮದ್ ಖಾನ್, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ದೇಶಪಾಂಡೆ ಐಸಿಯುನಿಂದ ಸಿದ್ದರಾಮಯ್ಯ ಅವರನ್ನು ಸ್ಪೆಷಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ನಮ್ಮೊಂದಿಗೆ ಲವಲವಿಕೆಯಿಂದ ಮಾತನಾಡಿದರು. ಬಹುಶಃ ಸಂಜೆ ಸಿದ್ದರಾಮಯ್ಯ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ