ರಾಜೀನಾಮೆ ನೀಡುವ ಚಿಂತನೆ ನಡೆಸಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಡಿ.13- ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಚಿಂತನೆ ನಡೆಸಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ವಿಧಾನಸಭೆ ಉಪ ಚುನಾವಣೆ ಸೋಲಿನ ಪರಾಮರ್ಶೆಯನ್ನು ಪಕ್ಷದ ವರಿಷ್ಠರೊಂದಿಗೆ ನಡೆಸಲಾಗಿದೆ. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸ್ತಾಪ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಉಪ ಚುನಾವಣೆಯಲ್ಲಿ ಪಕ್ಷಕ್ಕಾಗಿರುವ ಭಾರೀ ಹಿನ್ನಡೆ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಆ ಸಂದರ್ಭದಲ್ಲಿ ಸೋಲಿನ ಪ್ರಮುಖ ಕಾರಣಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದರು.

ಸಂಪೂರ್ಣವಾಗಿ ಪಕ್ಷವನ್ನು ಪುನರ್‍ರಚನೆ ಮಾಡುವುದಾದರೆ ತಮ್ಮ ಅಭ್ಯಂತರವಿಲ್ಲ. ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಿ ಬಲಗೊಳಿಸಬೇಕು ಎಂಬುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ತಾವು ಬದ್ಧ ಎಂದು ಹೇಳಿದರು.

ಉಪ ಚುನಾವಣೆ ಫಲಿತಾಂಶದ ನಂತರ ಪಕ್ಷದಲ್ಲಿ ಯಾವುದೇ ರೀತಿಯ ಬದಲಾವಣೆಗಳ ಬಗ್ಗೆ ಚರ್ಚೆಯಾಗಲಿ, ತೀರ್ಮಾನವಾಗಿ ಈ ತನಕ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ