
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು.
ಉಪಚುನಾವಣೆ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂತೋಷ್ ಅವರು ಚರ್ಚಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ, ಪರಿಸ್ಥಿತಿ ನಿಯಂತ್ರಣ ಕುರಿತಂತೆ ಮಾತುಕತೆ ನಡೆಸುವ ಜತೆಗೆ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.