
ಬೆಂಗಳೂರು,ಡಿ.16-ಸಿದ್ದರಾಮಯ್ಯನವರ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ರಾಜೀನಾಮೆ ನೀಡಿರುವುದು ನನಗಲ್ಲ. ಹೈಕಮಾಂಡ್ಗೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕೆಲಸ ಮಾಡಿದ್ದಾರೋ ಬಿಟ್ಟಿದ್ದಾರೋ ಮುಖ್ಯವಲ್ಲ. ಕಾಂಗ್ರೆಸ್ ಪಕ್ಷದ ಸೋಲು ಸೋಲೇ.
ಆತ್ಮಾವಲೋಕನ ಮಾಡಿಕೊಂಡು ನಾವು ಮುಂದುವರೆಯಬೇಕಿದೆ. ಸಿದ್ದರಾಮಯ್ಯನವರು ನೀಡಿರುವ ರಾಜೀನಾಮೆಯ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.
ಪಕ್ಷ ಏನು ಹೇಳುತ್ತದೆ ಅದನ್ನು ಮಾಡುವುದಷ್ಟೇ ನಮ್ಮ ಕೆಲಸ. ನಾವು ರಾಜಕಾರಣ ಮಾಡಬೇಕಾದದು ಮಾದ್ಯಮಗಳ ಮುಂದಲ್ಲ. ರಾಜಕಾರಣ ಅದರ ಪಾಡಿಗೆ ಅದು ನಡೆಯುತ್ತಿರುತ್ತದೆ ಎಂದು ಹೇಳಿದರು.