21ರ ಮಧ್ಯರಾತ್ರಿವರೆಗೂ ನಗರದಲ್ಲಿ ನಿಷೇಧಾಜ್ಞೆ

ಬೆಂಗಳೂರು,ಡಿ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದರ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರಾದ್ಯಂತ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದ್ದರೂ ಸಹ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ನಗರದ ಪುರಭವನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಆಯಾಕಟ್ಟಿನ ಪ್ರದೇಶಗಳಲ್ಲಿ ಬೆಳಗಿನಿಂದಲೇ ಪೋಲೀಸರು ಪಹರೆ ನಡೆಸುತ್ತಿದ್ದಾರೆ. ಸಭೆ ಸಮಾರಂಭಗಳು ರದ್ದುಗೊಂಡಿವೆ. 21ರ ಮಧ್ಯರಾತ್ರಿವರೆಗೂ ನಗರದಲ್ಲಿ ನಿಷೇಧಾಜ್ಞೆ ಇರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ