ಬೆಂಗಳೂರು, ಡಿ.20-ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಪ್ರತಿ ಪ್ರತಿಭಟನೆಯೂ ಹಿಂಸಾತ್ಮಕವಾಗಿರುತ್ತದೆ ಎಂದು ಊಹಿಸಲು ಸಾಧ್ಯವೇ? ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಿದರೆ ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತೀರಾ ಎಂಬುದನ್ನು ಸಂಜೆ 4 ಗಂಟೆಯೊಳಗೆ ತಿಳಿಸಿ ಎಂದು ಸೂಚಿಸಿದೆ.
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ನಿರಾಕರಿಸಿ ನಿಷೇಧಾಜ್ಞೆ ಜಾರಿಗೊಳಿಸಿದ ಕ್ರಮ ಆಕ್ಷೇಪಿಸಿ ರಾಜ್ಯಸಭಾ ಸದಸ್ಯ ರಾಜೀವ್ಗೌಡ ಹಾಗೂ ಶಾಸಕಿ ಸೌಮ್ಯರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರ ವಿಭಾಗೀಯ ಪೀಠ, ಸರ್ಕಾರದ ನಿರ್ಧಾರ ಒಪ್ಪಿಗೆಯಾಗದಿದ್ದರೆ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶವೇ ಇಲ್ಲವೇ ಎಂದು ಪ್ರಶ್ನಿಸಿದೆ.
ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿ ವಾಪಸ್ ಪಡೆದಿದ್ದು, ಏಕೆ? ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಪ್ರತಿಭಟನೆ ನಡೆಸಲು ಮತ್ತೆ ಅನುಮತಿ ನೀಡುತ್ತೀರಾ ಎಂಬುದನ್ನು ಸಂಜೆ 4 ಗಂಟೆಯೊಳಗೆ ತಿಳಿಸಿ ಎಂದು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಅರ್ಜಿಯನ್ನು ಮುಂದೂಡಿದೆ.