ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಅನಾರೋಗ್ಯ ಹಿನ್ನೆಲೆ-ನಾಳೆ ನಗರಕ್ಕೆ ಗೃಹ ಸಚಿವ ಅಮಿತ್ ಶಾ

ಬೆಂಗಳೂರು,ಡಿ.20- ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್‍ನ ಕಸ್ತೂರ ಬಾ ಆಸ್ಪತ್ರೆಗೆ ದಾಖಲಾಗಿರುವ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ನಾಳೆ ನಗರಕ್ಕೆ ಆಗಮಿಸಲಿದ್ದಾರೆ.

ಶ್ರೀಗಳ ಆರೋಗ್ಯ ಕುರಿತು ಈಗಾಗಲೇ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದಿರುವ ಅವರು ನಾಳೆ ಉಡುಪಿಗೆ ಆಗಮಿಸುವರೆಂದು ತಿಳಿದುಬಂದಿದೆ.

ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ.ಅನಂತ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಅಮಿತ್ ಷಾ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ಮೂಲಗಳ ಪ್ರಕಾರ ನಾಳೆ ನವದೆಹಲಿಯಿಂದ ಮಂಗಳೂರು ಮೂಲಕ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ಅಮಿತ್ ಷಾ ವಿಚಾರಿಸಲಿದ್ದಾರೆ.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕೂಡ ಪೇಜಾವರ ಶ್ರೀಗಳ ಆರೋಗ್ಯ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದರು. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಮೋದಿ ಅವರು ಪ್ರಾರ್ಥಿಸಿದ್ದಾರೆ.

ಇನ್ನು ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಮಂಗಳೂರಿಗೆ ಭೇಟಿ ಕೊಡಲಿದ್ದು, ತಮ್ಮ ಅಧಿಕೃತ ಕಾರ್ಯಕ್ರಮಗಳು ಮುಗಿದ ನಂತರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ