ಉಡುಪಿ: ಶುಕ್ರವಾರ ಮುಂಜಾನೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠದ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಸ್ಥಿತಿ ಗಂಭಿರವಾಗಿದೆ. ಹೀಗಾಗಿ, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಜೊತೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇಂದು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.
ಕಫ ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಅವರು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಮಾಹಿತಿ ಪಡೆದಿದ್ದಾರೆ. ಪೇಜಾವರ ಶ್ರೀಗಳ ಆಪ್ತಕಾರ್ಯದರ್ಶಿಗೆ ಕರೆ ಮಾಡಿರುವ ಪ್ರಧಾನಿಗಳು ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಕೆಲವು ದಿನಗಳಿಂದ ಪೇಜಾವರ ಶ್ರೀಗಳಿಗೆ ಆಗಾಗ ಅನಾರೋಗ್ಯ ಕಾಡುತ್ತಿತ್ತು. ನಿನ್ನೆ ಬೆಳಗ್ಗೆ 3 ಗಂಟೆಗೆ ಉಸಿರಾಟದ ಸಮಸ್ಯೆ ಹೆಚ್ಚಾದ್ದರಿಂದ ಕೂಡಲೇ ಅವರನ್ನು ಮಣಿಪಾಲಕ್ಕೆ ಕರೆದೊಯ್ಯಲಾಯಿತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಸ್ಥಿತಿ ಚಿಂತಾಜನಕವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರ ವಿಸರ್ಜನೆಯಾಗಿರುವುದನ್ನು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ. ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.