ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯವರು ಹೊರ ರಾಜ್ಯದವರು-ಪೋಲೀಸ್ ಆಯುಕ್ತ ಭಾಸ್ಕರ್‍ರಾವ್

ಬೆಂಗಳೂರು, ಡಿ.21- ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯದವರು ಭಾಗವಹಿಸಿದ್ದರು ಎಂದು ನಗರ ಪೋಲೀಸ್ ಆಯುಕ್ತ ಭಾಸ್ಕರ್‍ರಾವ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬೆಂಗಳೂರಿಗೆ ವ್ಯಾಸಂಗಕ್ಕಾಗಿ ಬಂದಿರುವ ವಿದ್ಯಾರ್ಥಿಗಳು ಹಾಗೂ ಬುದ್ದಿ ಜೀವಿಗಳು ಎನಿಸಿಕೊಂಡ ಕೆಲವರು ಪ್ರತಿಭಟನೆಗೆ ಬೆಂಬಲ ನೀಡಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದರು.

ಸ್ಥಳೀಯರ್ಯಾರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ. ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವವರ ಮೇಲೆ ನಿಗಾ ವಹಿಸಲಾಗಿದೆ. ಸಾಮಾಜಿಕ ಜಾಲತಾಣದ ಮೇಲೂ ಕಣ್ಣಿಡಲಾಗಿದೆ ಎಂದರು.

ಪ್ರತಿಭಟನೆ ನಡೆದ ದಿನ 244 ಮಂದಿಯನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಪೆÇಲೀಸ್ ಸಿಬ್ಬಂದಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿಲ್ಲ. ಆದರೆ, ವಿಚಾರಣೆ ನಡೆಸಿದ್ದೇವೆ ಎಂದು ಹೇಳಿದರು.

ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಂಜೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭಾಸ್ಕರ್‍ರಾವ್ ತಿಳಿಸಿದರು.

8 ಪ್ರಕರಣ ದಾಖಲು:
ಇದುವರೆಗೂ ಕೇಂದ್ರ ವಿಭಾಗದಲ್ಲಿ 8 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಎರಡು ಪ್ರಕರಣಗಳು ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಲಾಕಾಲೇಜು ಬಳಿ ಪ್ರತಿಭಟನೆ ಮಾಡಲು ಬಂದವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.

ಪ್ರತಿಭಟನೆ ನಡೆದ ದಿನ ಎಸ್.ಜೆ.ಪಾರ್ಕ್, ಹಲಸೂರು ಠಾಣೆಯಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ