![rebel-karnataka-mlas-joining-bjp-750](http://kannada.vartamitra.com/wp-content/uploads/2019/12/rebel-karnataka-mlas-joining-bjp-750-572x381.jpg)
ಬೆಂಗಳೂರು, ಡಿ.21-ರಾಜ್ಯ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಚುನಾಯಿತರಾಗಿರುವ ನೂತನ ಶಾಸಕರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಶಾಸಕರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಬಿಜೆಪಿಯ ಮಹೇಶ್ ಕುಮಟಳ್ಳಿ(ಅಥಣಿ), ಡಾ.ಕೆ.ಸುಧಾಕರ್ (ಚಿಕ್ಕಬಳ್ಳಾಪುರ), ರಮೇಶ್‍ಜಾರಕಿಹೊಳಿ (ಗೋಕಾಕ್), ಬಿ.ಸಿ.ಪಾಟೀಲ್(ಹಿರೇಕೆರೂರು), ಶ್ರೀಮಂತ ಪಾಟೀಲ್(ಕಾಗವಾಡ), ಭೆರತಿ ಬಸವರಾಜ್(ಕೆ.ಆರ್.ಪುರ), ಕೆ.ಸಿ.ನಾರಾಯಣಗೌಡ (ಕೆ.ಆರ್.ಪೇಟೆ),ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್), ಆನಂದ್‍ಸಿಂಗ್(ವಿಜಯನಗರ), ಎಂ.ಜಿ.ಅರುಣ್ ಕುಮಾರ್(ರಾಣೆಬೆನ್ನೂರು), ಶಿವರಾಮ ಹೆಬ್ಬಾರ್(ಯಲ್ಲಾಪುರ), ಎಸ್.ಟಿ.ಸೋಮಶೇಖರ್(ಯಶವಂತಪುರ) ಅವರು ನಾಳೆ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್‍ನ ರಿಜ್ವಾನ್ ಅರ್ಷದ್(ಶಿವಾಜಿನಗರ), ಎಚ್.ಪಿ.ಮಂಜುನಾಥ್(ಹುಣಸೂರು) ಹಾಗೂ ಶರತ್ ಬಚ್ಚೇಗೌಡ(ಹೊಸಕೋಟೆ) ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ 12 ಅಭ್ಯರ್ಥಿಗಳು ಚುನಾಯಿತರಾಗಿದ್ದರು. ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿ ಒಬ್ಬರು ಚುನಾಯಿತರಾಗಿದ್ದರು.