ಕೇರಳದ ವಿವಿಧೆಡೆ ಇಂದು ಪ್ರತಿಭಟನೆ

ತಿರುವನಂತಪುರಂ, ಡಿ.21-ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಕಾಂಗ್ರೆಸ್ ಮುಖಂಡರು ಕೇರಳದ ವಿವಿಧೆಡೆ ಇಂದು ಪ್ರತಿಭಟನೆ ನಡೆಸಿದರು.

ಪಕ್ಷದ ಧುರೀಣರಾದ ರಮೇಶ್ ಚಿನ್ನತ್ತಾಲ, ಮುಳ್ಳಪಲ್ಲಿ ರಾಮಚಂದ್ರನ್, ಕೆ.ಸಿ.ವೇಣುಗೋಪಾಲ್, ಶಶಿ ತರೂರ್ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಿದ್ದರು.

ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ರಮೇಶ್ ಚಿನ್ನತ್ತಾಲ, ಮಣಪ್ಪುರಂದಲ್ಲಿ ಕೆ.ಸಿ.ವೇಣುಗೋಪಾಲ್, ಅಳಪುಳದಲ್ಲಿ ಮತ್ತು ಶಶಿತರೂರ್ ಕೋಳಿಕೋಡ್‍ನಲ್ಲಿ ಪ್ರತಿಭಟನೆ ನಡೆಸಿದರು.

ಈ ವಿವಾದಿತ ಕಾಯ್ದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕರು. ಈ ಅಧಿನಿಯಮ ಜಾರಿಯಿಂದ ದೇಶಾದ್ಯಂತ ರೋಷಾಗ್ನಿ ಜ್ವಾಲೆ ಹೊತ್ತಿ ಉರಿದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಪೋಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ