ಬೆಂಗಳೂರು,ಡಿ.24- ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು.
ಸಂಬಂಧಪಟ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೃತಪಟ್ಟ ಕುಟುಂಬದವರಿಗೆ 25 ಲಕ್ಷ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್ ಪ್ರಕರಣದ ಸತ್ಯಾಂಶ ಹೊರಬರಲು ನ್ಯಾಯಾಂಗ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ವಹಿಸದಿದ್ದರೆ ಡಿ.28ರಿಂದ ಹೋರಾಟ ನಡೆಸುವುದಾಗಿ ಹೇಳಿದರು.
ಎನ್ಆರ್ಸಿ ಬಗ್ಗೆ ಪ್ರಧಾನಿ ಹಾಗೂ ಅಮಿತ್ ಷಾ ಅವರ ಹೇಳಿಕೆ ನಡುವೆ ಗೊಂದಲವಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನಕ್ಕೆ ವಿರುದ್ದವಾಗಿದೆ. ಅಂಬೇಡ್ಕರ್ ಅವರ ಸಂವಿಧಾನ ಉಳಿಯಬೇಡವೇ ಎಂದು ಅವರು ಪ್ರಶ್ನಿಸಿದರು.