ನವದೆಹಲಿ,ಡಿ.25- ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಚಾಲನೆ ನೀಡಿದರು.
ದೇಶಾದ್ಯಂತ ಅಂತರ್ಜಲ ಸಂವರ್ಧನೆ ಮತ್ತು ನಿರ್ವಹಣೆಗಾಗಿ ಅಟಲ್ ಭೂಜಲ ಯೋಜನೆಗೆ ಇಂದು ಮೋದಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಜಲಕ್ಷಾಮ ತಪ್ಪಿಸಲು ಮುಂದಿನ ಜನಾಂಗಕ್ಕಾಗಿ ಹನಿ ಹನಿ ನೀರನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನೀರು ಅನಗತ್ಯವಾಗಿ ಪೋಲಾಗುತ್ತಿರುವುದನ್ನು ತಪ್ಪಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅನ್ವೇಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನವೋದ್ಯಮ ಸಂಸ್ಥೆಗಳು ವಿವಿಧ ಉದ್ದೇಶಗಳಿಗಾಗಿ ನೀರನ್ನು ಅತ್ಯಂತ ಮಿತವಾಗಿ ಬಳಸುವ ತಾಂತ್ರಿಕತೆಯನ್ನು ಅಭಿವೃದ್ದಿಗೊಳಿಸುವಂತೆ ಪ್ರಧಾನಿ ಸಲಹೆ ಮಾಡಿದರು.
ಇದೇ ಸಂದರ್ಭದಲ್ಲಿ ರೋಹಟಂಗ್ ಎಕ್ಸ್‍ಪ್ರೆಸ್ ಹೆದ್ದಾರಿಗೆ ಅಟಲ್ ಟನಲ್(ಸುರಂಗ ಮಾರ್ಗ) ಲೋಕಾರ್ಪಣೆ ಮಾಡಿದರು.
ನಂತರ ಉತ್ತರಪ್ರದೇಶದ ಲೋಕಭವನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 25 ಎತ್ತರದ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.