ರಕ್ಷಿತ್ ಶೆಟ್ಟಿ ಅಭಿನಯದ, ಬಹು ನಿರೀಕ್ಷಿತ ‘ಅವನೇ ಶ್ರೀಮನ್ನಾರಾಯಣ’ ಈ ವಾರ ತೆರೆಗೆ

ಪುಷ್ಕರ್ ಫಿûಲಂಸ್ ಹಾಗೂ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಕೆ.ಹೆಚ್.ಪ್ರಕಾಶ್ ಅವರು ನಿರ್ಮಿಸಿರುವ `ಅವನೇ ಶ್ರೀಮನ್ನಾರಾಯಣ` ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.

ರಕ್ಷಿತ್ ಶೆಟ್ಟಿ  ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಸಚಿನ್ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಹಾಗೂ ಚರಣ ರಾಜ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಹಿನ್ನೆಲ್ಲೆ ಸಂಗೀತ ನೀಡಿದ್ದಾರೆ. ಕರಮ್ ಚಾವ್ಲಾ ಛಾಯಾಗ್ರಹಣ, ಸಚಿನ್ ಸಂಕಲನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ಇಮ್ರಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಶಾನ್ವಿ ಶ್ರೀವಾತ್ಸವ್. ಅಚ್ಯುತಕುಮಾರ್, ಬಾಲಾಜಿ ಮನೋಹರ್, ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ರಘು ರಮಣಕೊಪ್ಪ, ವಿಜಯ್ ಚೆಂಡೂರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ