ಶ್ರೀ ವೀರೇಂದ್ರ ಹೆಗಡೆಯವರಿಗೆ ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ

ಬೆಂಗಳೂರು,ಡಿ.24- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯು ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗಡೆ ಅವರಿಗೆ ಸಂದಿದೆ.

ಯುಗದ ಸಾಧಕ ಪ್ರಶಸ್ತಿಯನ್ನು ನಿಘಂಟು ತಜ್ಞ ವೆಂಕಟಸುಬ್ಬಯ್ಯ ಅವರಿಗೆ ನೀಡಲಾಗುವುದು ಎಂದು ಪ್ರೆಸ್‍ಕ್ಲಬ್ ಕಾರ್ಯಕಾರಿ ಸಮಿತಿ ತಿಳಿಸಿದೆ.

ಡಿ.31ರಂದು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಂ.ಸಿದ್ದರಾಜು, ಸುನೀಲ್ ಪ್ರಸಾದ್, ಕೆ.ಎಚ್.ಸಾವಿತ್ರಿ, ರವೀಂದ್ರ ಜಿ.ಭಟ್, ಕೆ.ಎನ್.ಚೆನ್ನೇಗೌಡ,ಹರಿಶ್ಚಂದ್ರ ಭಟ್, ಅಬ್ದುಲ್ ಎಂ. ಅಮೀದ್, ಇಮ್ರಾನ್ ಖುರೇಷಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವೆರ್, ಎನ್.ಎಸ್.ಶಂಕರ್, ಡಾ.ಬಿ.ಕೆ.ರವಿ, ರು.ಬಸಪ್ಪ, ಜಯಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ