
ಶ್ರೀನಗರ: ಜಮ್ಮು- ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ರಾಂಪುರ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನಾಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಉರಿಯ ಹಜಿಪೀರ್ ಪ್ರದೇಶದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ಇಂದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸೈನ್ಯದ ಕಿರಿಯ ನಿಯೋಜಿತ ಅಧಿಕಾರಿ ಹತರಾಗಿದ್ದಾರೆ. ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆಯಿಂದಲೂ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.