ಪೇಜಾವರ ಶ್ರೀ ವಿಧಿವಶ; ಇಂದು ರಾತ್ರಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ

ಉಡುಪಿ: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಠದಲ್ಲೇ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 9.20ಕ್ಕೆ ಕೊನೆಯುಸಿರೆಳೆದಿರುವ ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 1 ಗಂಟೆಯ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕರೆತರಲಾಗುವುದು
ಇಂದು ಮಧ್ಯಾಹ್ನ ಏರ್​ಲಿಫ್ಟ್​ ಮೂಲಕ ಶ್ರೀಗಳ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕರೆತರಲಾಗುವುದು. ಇಂದು ಸಂಜೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಇಂದು ರಾತ್ರಿಯೇ ಬೆಂಗಳೂರಿನಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಲಿದೆ.

ಶ್ರೀಗಳು ವಿಧಿವಶರಾದ ಸುದ್ದಿ ತಿಳಿಯುತ್ತಿದ್ದಂತೆ ಅಧೋಕ್ಷಜ ಮಠದ ಮುಂದೆ ಭಕ್ತರ ದಂಡೇ ಸೇರುತ್ತಿದೆ. ಇಂದು ಬೆಳಗ್ಗೆ 10 ಗಂಟೆಯ ಬಳಿಕ ಅಜ್ಜರಕಾಡು ಮೈದಾನದಲ್ಲಿ ಅಂತಿಮ ದರ್ಶನ ಪಡೆಯಬಹುದು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಇಂದು ರಾತ್ರಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ