ಸಾಹಸ ಸಿಂಹ ವಿಷ್ಣುವರ್ಧನ್ ಅವರ 10ನೆ ವರ್ಷದ ಪುಣ್ಯತಿಥಿ

ಬೆಂಗಳೂರು, ಡಿ.30- ಸಾಹಸ ಸಿಂಹ ವಿಷ್ಣುವರ್ಧನ್ ಅವರ 10ನೆ ವರ್ಷದ ಪುಣ್ಯತಿಥಿ ಅಂಗವಾಗಿ ಇಂದು ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು, ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಪೂಜೆ ಸಲ್ಲಿಸಿದರು.

ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಪುಣ್ಯತಿಥಿ ನಿಮಿತ್ತ ವಿಷ್ಣು ಸೇನಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ದಿನಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ರಕ್ತದಾನ, ನೇತ್ರದಾನ ಹಾಗೂ ಅನ್ನದಾನದಂತಹ ಕೈಂಕರ್ಯಗಳು ನೆರವೇರಿದ್ದು , ಅಪಾರ ಸಂಖ್ಯೆಯ ಅಭಿಮಾನಿಗಳು ನೆಚ್ಚಿನ ನಟನ ಸಮಾಧಿ ಬಳಿ ಬಂದು ನಮನ ಸೇಲ್ಲಿಸಿದರು.

ದಿನಪೂರ್ತಿ ವಿಷ್ಣು ಅಭಿನಯದ ಗೀತೆಗಳನ್ನು ಹಾಡುವ ಕಾರ್ಯಕ್ರಮವೂ ಹಮ್ಮಿಕೊಳ್ಳಲಾಗಿತ್ತು.

ಸಮಾಧಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

2009ರ ಡಿ.30ರಂದು ವಿಷ್ಣುವರ್ಧನ್ ಇಹಲೋಕ ತ್ಯಜಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ