ಲಖ್ನೋ,ಜ.3- ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಕ್ರಿಯವಾಗಿ ಭಾಗಿಯಾಗಿದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿದ್ದು, ಬಂಧನಕ್ಕೊಳಗಾಗಿರುವ ಪಿಎಫ್ಐ 15 ಸದಸ್ಯರ ಬಗ್ಗೆ ಸಾಕ್ಷಿಯಿದೆ ಎಂದು ಉತ್ತರಪ್ರದೇಶ ಡಿಜಿಪಿ ಒಪಿ ಸಿಂಗ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಇತ್ತೀಚಿನ ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ, ಅದಕ್ಕಾಗಿಯೇ ನಾವು ಅವರ 25 ಸದಸ್ಯರನ್ನು ಬಂಧಿಸಿದ್ದೇವೆ. ಅವರ ವಿರುದ್ಧ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದರು.
ಈ ಹಿಂದೆ, ತಿದ್ದುಪಡಿ ಮಾಡಿದ ಪೌರತ್ವ ಕಾನೂನಿನ ವಿರುದ್ಧ ಇತ್ತೀಚೆಗೆ ನಡೆದ ರಾಜ್ಯವ್ಯಾಪಿ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಯುಪಿ ಪೋಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಲು ಕೋರಲಾಗಿತ್ತು.
ಹಿಂಸಾಚಾರದ ಮಾಸ್ಟರ್ ಮೈಂಡ್ ಆಗಿರುವ ಮುಖ್ಯಸ್ಥ ವಾಸಿಮ್ನನ್ನು ಬಂಧಿಸಲಾಗಿದ್ದು, ಪಿಎಫ್ಐ ನಿಷೇಧಕ್ಕೆ ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದೇವೆ ಎಂದು ಅವರು ಹೇಳಿದರು.
ಸಿಎಎ ವಿರೋಧಿ ಸಂದರ್ಭದಲ್ಲಿ ರಾಜ್ಯ ರಾಜಧಾನಿಯಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಆರೋಪದ ಮೇಲೆ ಪಿಎಫ್ಐ ಅನ್ನು ನಿಷೇಧಿಸುವಂತೆ ಕೋರಿ ತಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವುದಾಗಿ ಡಿಜಿಪಿ ಒಪಿ ಸಿಂಗ್ ಅವರು ಹೇಳಿದರು.
ಸಿಎಎ ವಿರೋಧಿಸಿ ಪಶ್ಚಿಮ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಸಾಮೂಹಿಕ ಸಭೆಗಳನ್ನು ನಡೆಸಿ ಪ್ರಚೋದಿಸಲು ಯತ್ನಿಸಿದ ಆರೋಪದ ಮೇಲೆ ಡಿ.19ರಂದು ಪಿಎಫ್ಐನ 14 ಸದಸ್ಯರು ಸೇರಿದಂತೆ 28 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.