ನವದೆಹಲಿ: ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ತಿಂಗಳ ನಂತರದಲ್ಲಿ ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಖಾತೆ ಹಂಚಿಕೆ ಮಾಡಿದೆ. ಯರ್ಯಾರಿಗೆ ಯಾವ ಯಾವ ಖಾತೆ ನೀಡಲಾಗಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಅಧಿಕೃತವಾಗಿ ಘೋಷಣೆ ಮಾಡಿದರು.
ಎನ್ಸಿಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ಗೆ ಹಣಕಾಸು ಖಾತೆ ನೀಡಲಾಗಿದೆ. ಆದಿತ್ಯ ಠಾಕ್ರೆಗೆ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಗೃಹ ಖಾತೆ, ಶಿವಸೇನೆಯ ಎಕಾಂತ್ ಶಿಂಧೆಗೆ ನಗರಾಭಿವೃದ್ಧಿ ಖಾತೆ ನಿಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಬಾಲಾಸಾಹೇಬ್ ಥೊರಾಟ್ಗೆ ಕಂದಾಯ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಖಾತೆ ಹಂಚಿಕೆ ಆಗಿರಲಿಲ್ಲ. ಯಾರಿಗೆ ಯಾವ ಖಾತೆ ಹಂಚಿಕೆ ಆಗಲಿದೆ ಎನ್ನುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಉದ್ಧವ್ ಅಧಿಕೃತ ಮಾಹಿತಿ ನೀಡಿದ್ದಾರೆ. ಸರ್ಕಾರ ರಚನೆಯಲ್ಲಿ ಎನ್ಸಿಪಿ ಪ್ರಮುಖ ಪಾತ್ರವಹಿಸಿತ್ತು. ಹೀಗಾಗಿ, ಹಣಕಾಸು ಸೇರಿ ಪ್ರಮುಖ ಖಾತೆಗಳು ಎನ್ಸಿಪಿ ಪಾಲಾಗಿದೆ. ಸಂಪೂರ್ಣ ಖಾತೆ ಹಂಚಿಕೆ ಇನ್ನಷ್ಟೇ ಆಗಬೇಕಿದೆ.