ಬೆಂಗಳೂರು: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಬೆಂಗಳೂರಿನ ಪ್ರಸಿದ್ದ ಇಸ್ಕಾನ್ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ. ದೇಗುಲದಲ್ಲಿ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿದ್ದು, ಭಕ್ತರು ವೈಕುಂಠ ದ್ವಾರದ ಮೂಲಕ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದರೆ ವಿಶೇಷ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ತಿರುಪತಿ ತಿರುಮಲ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.
ವೈಕುಂಠ ಏಕಾದಶಿಯ ದಿನ ಬಹಳಷ್ಟು ಭಕ್ತರು ಉಪವಾಸವಿದ್ದು, ದೇವರ ಪೂಜೆ ಕೈಗೊಳ್ಳುತ್ತಾರೆ.