ಬೆಂಗಳೂರು, ಜ.6-ಸರ್ಕಾರದ ಕಾರ್ಮಿಕ ವಿರೋಧಿ, ಜನವಿರೋಧಿ ನೀತಿಗಳ ವಿರುದ್ಧ್ದ ಜ.8 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಜಂಟಿ ಸಮಿತಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಟಿ.ಯು.ಸಿ ಸಿ ನ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಅಂದು ಬೆಳಗ್ಗೆ 11.30ಕ್ಕೆ ಟೌನ್ಹಾಲ್ ಮುಂಭಾಗದಿಂದ ಮೈಸೂರು ಬ್ಯಾಂಕ್ ರಸ್ತೆ ಮೂಲಕ ಫ್ರೀಡಂಪಾರ್ಕ್ ತಲುಪಿ ಪ್ರತಿಭಟನಾ ಸಭೆ ನಡೆಸಲಾಗುವುದಾಗಿ ತಿಳಿಸಿದರು.
ಸಭೆಯಲ್ಲಿ 21 ಸಾವಿರ ರಾಷ್ಟ್ರ ವ್ಯಾಪಿ ಸಮಾನ ಕನಿಷ್ಠ ವೇತನ ನಿಗದಿ ಪಡಿಸಬೇಕು, ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಗಳಿಗಾಗಿ ಡಾ. ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು,ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಲಪಡಿಸಬೇಕು,ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿರುವ ನೀತಿಗಳನ್ನು ಕೈಬಿಡಬೇಕು,ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.