ರೈತರ ಆದಾಯ ಹೆಚ್ಚಿಸಲಿದೆ ಈ ಯೋಜನೆ

ನವದೆಹಲಿ2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇದೀಗ, ಕೃಷಿ ರಫ್ತು ಉತ್ತೇಜಿಸಲು ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಪಂಜಾಬ್ ಮತ್ತು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳು ಕೇಂದ್ರದಲ್ಲಿ ಕೃಷಿ ರಫ್ತು ನೀತಿಗಾಗಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿವೆ. ಕೃಷಿ ರಫ್ತು ದ್ವಿಗುಣಗೊಳಿಸುವುದು ಈ ನೀತಿಯ ಉದ್ದೇಶ.

ಕೃಷಿ ರಫ್ತು ನೀತಿಯ ಉದ್ದೇಶ ರಫ್ತು ದ್ವಿಗುಣಗೊಳಿಸುವುದು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವುದು. ಅನೇಕ ರಾಜ್ಯಗಳು ಇದಕ್ಕಾಗಿ ನೋಡಲ್ ಏಜೆನ್ಸಿ ಮತ್ತು ನೋಡಲ್ ಅಧಿಕಾರಿಯನ್ನು ನೇಮಿಸಿವೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ನಾಗಾಲ್ಯಾಂಡ್, ತಮಿಳುನಾಡು, ಅಸ್ಸಾಂ, ಪಂಜಾಬ್ ಮತ್ತು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಿದೆ. ಹಲವಾರು ಇತರ ರಾಜ್ಯಗಳು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸುವ ವಿವಿಧ ಹಂತಗಳಲ್ಲಿವೆ.

ಕೃಷಿ ರಫ್ತು ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA) ರಾಜ್ಯ ಸರ್ಕಾರಗಳ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರೀಕೃತ ವಿಧಾನವನ್ನು ಅನುಸರಿಸುತ್ತಿದೆ.

ರಾಜ್ಯ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಎಪಿಎಡಿಎ ಇಡೀ ವರ್ಷದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿತು. ಇವುಗಳಲ್ಲಿ, ಉತ್ಪಾದನಾ ಕ್ಲಸ್ಟರ್, ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಮತ್ತು ಜಾರಿ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಬಜೆಟ್ ಅವಶ್ಯಕತೆಗಳಂತಹ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಪಶುಸಂಗೋಪನೆ ಮತ್ತು ಡೈರಿ, ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದೆ. ಅನೇಕ ರಾಜ್ಯಗಳು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಿವೆ. ಎಪಿಇಡಿಯಾದ ನೋಡಲ್ ಅಧಿಕಾರಿಗಳು ಕ್ಲಸ್ಟರ್‌ಗೆ ಹೋಗಿ ರೈತರ ಸಮಸ್ಯೆಗಳು ಮತ್ತು ಅವುಗಳಿಗೆ ಯಾವ ರೀತಿಯ ಸಹಾಯ ಒದಗಿಸಬೇಕು ಎಂಬುದರ ಬಗ್ಗೆ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿವೆ.

ಈ ನೀತಿಯನ್ನು ಜಾರಿಗೆ ತರಲು ಎಪಿಎಡಿಎ ಅನೇಕ ಸೆಮಿನಾರ್‌ಗಳು ಮತ್ತು ಸಭೆಗಳನ್ನು ಆಯೋಜಿಸಿದೆ. ಈ ನೂತನ ಯೋಜನೆಯು ಎಲ್ಲಾ ರೈತರಿಗೆ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸಹಕಾರಿಗಳ ಸಕ್ರಿಯ ಪಾತ್ರಕ್ಕಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದೊಂದಿಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನೂತನ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ಬಂದರೆ ನಮ್ಮ ರೈತರ ಆದಾಯ ಹೆಚ್ಚಾಗುವುದರ ಜೊತೆಗೆ ದೇಶದ ಆದಾಯವೂ ಅಧಿಕವಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ