ಹೊಸದಿಲ್ಲಿ: ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಇಂದು ಸಂಜೆ 4.30ಕ್ಕೆ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದ ಪಕ್ಷದ ನಾಯಕತ್ವದ ಕುರಿತು ಸೋನಿಯಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಬೇಕು ಎಂಬ ಬಗ್ಗೆ ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ತನ್ನ ಅಭಿಪ್ರಾಯ ತಿಳಿಸಲಿದ್ದಾರೆ ಎನ್ನಲಾಗಿದೆ.
ಬುಧವಾರದ ನಂತರ ಸೋನಿಯಾ ಗಾಂಧಿ ಅವರು ವಿದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೂ ಮೊದಲೇ ಅಂದರೇ ಇಂದೇ ರಾತ್ರಿಯ ಒಳಗೆ ರಾಜ್ಯದ ನಾಯಕತ್ವದ ಬಗೆಗಿನ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ ಎನ್ನಲಾಗಿದೆ.