ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಸಲು ಕಸಾಪ ನಿರ್ಧಾರ

ಬೆಂಗಳೂರು: ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

ಕಲಬುರ್ಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕಸಾಪ ಅಧ್ಯಕ್ಷ ಮನು ಬಳಿಗಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಸಾಪ ತಿಳಿಸಿದೆ.

ಈಗ ಈ  ಕಸಾಪ ನಿರ್ಧಾರವನ್ನು ಸಚಿವ ಬಿ.ಸಿ.ಪಾಟೀಲ್ ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ.”ಹಾವೇರಿಯಲ್ಲಿ ಮುಂದಿನ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಾಗಿ ಘೋಷಣೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮನು ಬಳಿಗಾರ ಅವರಿಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ