ನಾಳೆ ಕರ್ನಾಟಕ ಬಂದ್; ಯಾವ ಸಂಘಟನೆ ಬೆಂಬಲ, ಯಾರ ಬೆಂಬಲ ಇಲ್ಲ?

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಗುರುವಾರ (ಫೆ.13) ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಪ್ರಥಮ ಪಿಯು ಪರೀಕ್ಷೆ ಮುಂದೂಡಿಕೆ ಇಲ್ಲ, ಶಾಲಾ, ಕಾಲೇಜಿಗೆ ರಜೆ ಇಲ್ಲ:

ನಾಳೆ ಎಂದಿನಂತೆ ಪ್ರಥಮ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ.

ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ಬಂದ್ ಗೆ ಯಾರ ಬೆಂಬಲ ಇಲ್ಲ:

ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹೋಟೆಲ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘಟನೆ, ನಾರಾಯಣ ಗೌಡ ಕರವೇ ಬಣ, ಬಿಎಂಟಿಸಿ, ಕೆಎಸ್ ಆರ್ ಟಿಸಿ ನೌಕರರ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ ನೈತಿಕ ಬೆಂಬಲ ನೀಡುವುದಾಗಿ ತಿಳಿಸಿವೆ.

ಬಂದ್ ಗೆ ಬೆಂಬಲ ನೀಡಿದವರು:

ನಾಳೆ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಒತ್ತಾಯಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಓಲಾ, ಉಬರ್ ಟ್ಯಾಕ್ಸಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ. ರೈತ ಸಂಘಟನೆ, ಹಸಿರು ಸೇನೆ, ಜಯ ಕರ್ನಾಟಕ ಸೇರಿದಂತೆ ನೂರಾರು ಸಂಘಟನೆ ಬೆಂಬಲ ನೀಡಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ