ಕೇಜ್ರಿವಾಲ್ 3.O: ಫೆಬ್ರವರಿ 16ಕ್ಕೆ ಪ್ರಮಾಣ ವಚನ

ನವದೆಹಲಿ: 62 ಸ್ಥಾನಗಳನ್ನು ಗೆಲ್ಲುವ ಮೂಲಕ ದೆಹಲಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಆಮ್ ಅದ್ಮಿ ನಾಯಕ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 16 ರಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಮಲೀಲಾ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲು ಚಿಂತನೆ ನಡೆದಿದೆ.

ಮೂರನೇ ಬಾರಿಗೆ ಸರ್ಕಾರ ರಚನೆ ಕಸರತ್ತು ಆರಂಭಿಸಿರುವ ಕೇಜ್ರಿವಾಲ್ ಇಂದು ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಫೆಬ್ರವರಿ 16 ರಂದು ಕಾರ್ಯಕ್ರಮ ಮಾಡಲು ಒಪ್ಪಿಗೆ ಪಡೆದುಕೊಂಡಿದ್ದಾರೆ. ಬಳಿಕ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರಿಗೂ ಕೇಜ್ರಿವಾಲ್ ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದು ಹೊಸ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ