
ಬೆಂಗಳೂರು,ಫೆ.12- ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ಗೆ ಮೇಯರ್ ಗೌತಮ್ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆ ವಿಚಾರವಾಗಿ ನಡೆಯುವ ಹೋರಾಟಗಳಿಗೆ ಸದಾ ನನ್ನ ಬೆಂಬಲ ಇದ್ದೇ ಇರುತ್ತದೆ ಎಂದು ಹೇಳಿದರು.
ನಮ್ಮ ಮಕ್ಕಳು ಕರ್ನಾಟಕದಲ್ಲಿ ಹುಟ್ಟಿ ಕೆಲಸಕ್ಕೆ ಬೇರೆ ಕಡೆ ಹೋಗುವುದು, ಹೋಗುವುದನ್ನು ನಾವು ಒಪ್ಪುವುದಿಲ್ಲ. ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು. ಹಾಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಮೇಯರ್ ತಿಳಿಸಿದರು.