ರೈತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿಎಂ ಬಿಎಸ್​ವೈಗೆ ಹುಟ್ಟುಹಬ್ಬದ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ ಅವರ ಹುಟ್ಟುಹಬ್ಬ. 78ನೇ ವಸಂತಕ್ಕೆ ಕಾಲಿರಿಸುತ್ತಿರುವ ಅವರಿಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಅವರಿಗೆ ಶುಭ ಹಾರೈಸಿ, ಟ್ವೀಟ್ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಶ್ರಮಜೀವಿ. ರಾಜ್ಯದ ಅಭಿವೃದ್ಧಿಗೆ ಅದರಲ್ಲಿಯೂ ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಅವರಿಗೆ ದೇವರು ಇನ್ನಷ್ಟು ಆರೋಗ್ಯ ಮತ್ತು ಆಯಸ್ಸು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.

ಕೇಂದ್ರ ಸಚಿವ ರಾಜನಾಥ್​ ಸಿಂಗ್​ ಕೂಡ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್​ ಮಾಡಿದ್ದು, ಕರ್ನಾಟಕದ ಅಭಿವೃದ್ಧಿಗಾಗಿ ಕಠಿಣ ಪರಿಶ್ರಮ ಪಡುತ್ತಿರುವ ಅವರಿಗೆ ದೀರ್ಘಾಯುಷ್ಯಿಯಾಗಿರಲಿ ಎಂದು ಹಾರೈಸಿದ್ದಾರೆ.

ರಾಜ್ಯ ನಾಯಕರು ಕೂಡ ಯಡಿಯೂರಪ್ಪಗೆ ಶುಭ ಕೋರಿ ಟ್ವೀಟ್​ ಮಾಡಿದ್ದು, ರಾಜ್ಯ ಕಂಡ ಅಪ್ರತಿಮ ರಾಜಕಾರಣಿ ನಮ್ಮ ಬಿಎಸ್​ ಯಡಿಯೂರಪ್ಪ ಅವರು ಎಂದು ಶುಭಕೋರಿದ್ದಾರೆ. ಪ್ರವಾಸೋದ್ಯಮ ಸಚಿವ ಸಿಟಿ ರವಿ ಕೂಡ ಬಿಎಸ್​ ಯಡಿಯೂರಪ್ಪ ಜನ್ಮ ದಿನಕ್ಕೆ ಶುಭಕೋರಿ ಟ್ವೀಟ್​ ಮಾಡಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ