
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಶುಶ್ರೂಷಕರ ತಾತ್ಕಾಲಿಕ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಹಲವಾರು ಆಕಾಂಕ್ಷಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಇಲಾಖೆಯ ಆಯುಕ್ತರು ಹಾಗೂ ಮುಖ್ಯ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಆಕಾಂಕ್ಷಿಗಳು, ನಾವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ಪ್ರಾಥಮಿಕ/ಸಮುದಾಯ ಆರೋಗ್ಯ ಕೇಂದ್ರ/ತಾಲ್ಲೂಕು ಆಸ್ಪತ್ರೆಗಳಲ್ಲಿ ಕಳೆದ 13 ರಿಂದ 15 ವರ್ಷಗಳಿಂದ ಶಶ್ರೂಷಕರಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ.
ಅಂತೆಯೇ ನಾವು ರಾಜ್ಯವಲಯದಡಿಯಲ್ಲಿ ನೇಮಕಾತಿ ಹೊಂದಿದ್ದೇವೆ. ಆದಾಗ್ಯೂ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ನಮಗಿಂತ ಕಡಿಮೆ ಅಂಕ ಮತ್ತು ಸೇವಾ ಹಿರಿತನದಲ್ಲಿ ಕಡಿಮೆ ಇರುವ ಹೆಸರುಗಳಿವೆ. ಆಯ್ಕೆ ಪಟ್ಟಿಯಲ್ಲಿರುವವರಿಗಿಂತ ನಮ್ಮ ಅಂಕಗಳು ಮತ್ತು ಸೇವಾ ಹಿರಿತನ ಹಚ್ಚಿದ್ದರು. ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದರಿಂದ ನಮಗೆ ಅನ್ಯಾಯವಾಗಿದ್ದು, ನಮ್ಮ ದಾಖಲಾತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಆಯ್ಕೆ ಪಟ್ಟಿಗೆ ಸೇರಿಸಬೇಕೆಂದು ಆಕಾಂಕ್ಷಿಗಳು ಮನವಿ ಮಾಡಿದ್ದಾರೆ.