ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ವಾರ್ಷಿಕ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ 23ರ ವರೆಗೆ ಪರೀಕ್ಷೆ ನಡೆಯಲಿದೆ.
ಈ ಬಾರಿ ಒಟ್ಟು 6,80,049 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 2,61,674 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 2,16,930 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಉಳಿದಂತೆ ಕಲಾ ವಿಭಾಗದಲ್ಲಿ 2,01,445 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈ ಬಾರಿ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಬಹಳಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಗಳಲ್ಲಿ ನಿಯಂತ್ರಣ ಘಟಕಗಳನ್ನು ಅಳವಡಿಸಲಾಗಿದೆ.