ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ; ನೀರಾವರಿಗೆ ಸಿಕ್ಕಿದ್ದು ಏನು?

ಬೆಂಗಳೂರು: ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ನೀಡಿದ್ದು ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮದಲ್ಲಿ “ಜಲಗ್ರಾಮ ಕ್ಯಾಲೆಂಡರ್” ಸಿದ್ಧಪಡಿಸಲು ಕ್ರಮ. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ “ಕಿಂಡಿ ಅಣೆಕಟ್ಟು ಯೋಜನೆ”ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.

ಅಟಲ್ ಭೂ-ಜಲ ಯೋಜನೆಯಡಿ 1202 ಕೋಟಿ ರೂ.ಗಳನ್ನು ಬಳಸಿಕೊಂಡು ರಾಜ್ಯದ ಆಯ್ದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ. ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ ಫ್ಲಡ್ ಇರಿಗೇಷನ್ ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕ್ರಮ.

ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ. ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.

ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ, ಮೊದಲನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ. ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನಾ ಜಲಾಶಯ ನಿರ್ಮಾಣದ ವಿಸ್ತೃತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ

ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ. ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣ- ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕ್ರಮ.

ರಾಮನಗರ ಜಿಲ್ಲೆಯ ಕಣ್ವ ಫಾರ್ಮ್‍ನಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ. ರಾಜ್ಯದಲ್ಲಿ ಪಶುಸಂಗೋಪನಾ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ, ಸಮಗ್ರ ನೀತಿ ರಚನೆ.

ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ.

ಲಿಂಗ ನಿರ್ಧಾರಿತ ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಹೆಣ್ಣು ಕರುಗಳ ಜನನ ಹೆಚ್ಚಿಸಲು ಎರಡು ಕೋಟಿ ರೂ. ಅನುದಾನ. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಜಾರಿ.

“ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1,000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.

ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ.

ಲಿಂಗ ನಿರ್ಧಾರಿತ ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಹೆಣ್ಣು ಕರುಗಳ ಜನನ ಹೆಚ್ಚಿಸಲು ಎರಡು ಕೋಟಿ ರೂ. ಅನುದಾನ. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಜಾರಿ.

“ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1,000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.

ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ. ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ. ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ. ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.

ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ. ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.

ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ

ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 ಎಫ್‍ಪಿಒ ರಚನೆ, ಈ ಎಫ್‍ಪಿಒ ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು. ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ