ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ.

ಮೃತ ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೊನೊ ಸೋಂಕು ತಗುಲಿದೆ. ಮೃತ ವೃದ್ಧನಿಗೆ ವೈದ್ಯರು ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದರು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮತ್ತೆರಡು ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ ಹತ್ತಕ್ಕೆರಿದೆ. ಬೆಂಗಳೂರಿನಲ್ಲಿ ಯುಕೆ ಪ್ರವಾಸದಿಂದ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಹಾಗೂ ಕಲಬುರಗಿಯಲ್ಲಿ (ಈ ಮೊದಲೇ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ) 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಿಬ್ಬರು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ಹೊಂದಿದ್ದೇನೆ ಎಂದು ಇಂದು ಬೆಳಗ್ಗೆ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ