ಮಹಾರಾಷ್ಟ್ರದಲ್ಲಿ ಕೊರೋನಾಗೆ ಮೊದಲ ಬಲಿ; ಭಾರತದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮುಂಬೈ; ಕರ್ನಾಟಕ, ದೆಹಲಿ ಬಳಿಕಾ ಮಹಾರಾಷ್ಟ್ರದಲ್ಲಿ ಇದೀಗ ಮಾರಣಾಂತಿಕ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದೆ. ದುಬೈನಿಂದ ಆಗಮಿಸಿದ್ದ 64 ವರ್ಷದ ವೃದ್ಧ ಇಂದು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ.

ಸೋಂಕು ಕಾಣಿಸಿಕೊಂಡ ತಕ್ಷಣ ವ್ಯಕ್ತಿಯನ್ನು ಪತ್ರ್ಯೇಕ ನಿಗಾ ಘಟಕದಲ್ಲಿರಿಸಿ ಕಳೆದ ಒಂದು ವಾರದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಕರ್ನಾಟಕದ ಕಲಬುರ್ಗಿ ಮತ್ತು ದೆಹಲಿಯಲ್ಲಿ ಕೊರೋನಾ ಸೋಂಕಿಗೆ ತಲಾ ಒಂದು ಬಲಿಯಾಗಿತ್ತು. ಇದೀಗ ಮಹಾರಾಷ್ಟ್ರದಲ್ಲೂ ಕೊರೋನಾ ಸೋಂಕು ಒಂದು ಬಲಿ ಪಡೆಯುವ ಮೂಲಕ ದೇಶದಲ್ಲಿ ಈ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಕೊರೋನಾಗೆ ಬಲಿಯಾದವರೆಲ್ಲರೂ ವೃದ್ಧರೇ ಎಂಬುದು ಉಲ್ಲೇಖಾರ್ಹ.

ಇನ್ನೂ ದೇಶದಾದ್ಯಂತ 115 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು ಕೇಂದ್ರ ಸರ್ಕಾರ ಈ ಸೋಂಕಿನ ಚಿಕಿತ್ಸೆಗೆ ಈಗಾಗಲೇ ಪ್ರಕೃತಿ ವಿಕೋಪ ನಿಧಿಯಿಂದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಹಣ ನೀಡಿದ್ದು ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ