ಕೊಡಗಿನಲ್ಲಿ ಮೊದಲ ಕೊರೊನಾ ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು: ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಇಂದು ಕೊಡಗಿನಲ್ಲಿ ಮೊದಲ #ಕೋವಿಡ್19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #ಕೋವಿಡ್19 ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.

15 ಕೊರೊನಾ ಪೀಡಿತರ ಪೈಕಿ ಈಗಾಗಲೇ ಮೊದಲ ರೋಗಿಯಾಗಿ ದಾಖಲಾಗಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಗುಣಮುಖರಾಗಿದ್ದಾರೆ. ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ರಾಜ್ಯದಲ್ಲಿ 11 ಮಂದಿ ಕೊರೊನಾ ಪೀಡಿತರಿದ್ದು ಬೆಂಗಳೂರಿನಲ್ಲಿ 8 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ ಕಲಬುರಗಿಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊಡಗಿಲ್ಲಿ ಒಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ